ಪುತ್ತೂರು: ಪುತ್ತೂರಿನಂತ ಗ್ರಾಮೀಣ ಭಾಗದಲ್ಲಿ ಅಂತರ ರಾಷ್ಟ್ರೀಯ ಕ್ರೀಡಾಪಟುಗಳಿರುವುದು ಅಭಿನಂದನಾರ್ಹ ಮತ್ತು ಕಬಡ್ಡಿ ಕ್ರೀಡಾಪಟುಗಳನ್ನು ಸೃಷ್ಟಿಸಿದ ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸೇವೆ ಶ್ಲಾಘನೀಯವಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಕಾರ್ಯಕ್ರಮವನ್ನು ಪುತ್ತೂರುಶ್ರೀಮಹಾಲಿಂಗೇಶ್ಚರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮುಳಿಯ ಕೇಶವ ಪ್ರಸಾದ್ ಉದ್ಘಾಟಿಸಿದರು.
ಪ್ರಶಾಂತ್ ಕೈಕಾರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪುತ್ತೂರಿನ ಪ್ರತಿಭೆಗಳು ಇನ್ನೂ ಒಂದಿಷ್ಟು ಸಾಧನೆಗಳನ್ನು ಮಾಡುವ ಮೂಲಕ ಪುತ್ತೂರಿನ ಹೆಸರನ್ನು ಹತ್ತೂರಿಗೆ ಪಸರಿಸಲಿ. ಕ್ರೀಡೆಯಲ್ಲಿ ಉದ್ಯೋಗ ಅವಕಾಶಗಳು ದೊರೆಯಲಿದ್ದು ಕ್ರೀಡಾ ಆಸಕ್ತರು ಕ್ರೀಡೆಯಲ್ಲಿ ಸಾಧನೆ ಮಾಡಿದ್ದಲ್ಲಿ ಮುಂದಿನ ಭವಿಷ್ಯ ಗಟ್ಟಿಗೊಳಿಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.