Home ಕರಾವಳಿ ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು..!

ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು..!

0

ಬಂಟ್ವಾಳ: ಕಾರುಡಿಕ್ಕಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಪಾವನಾ (23) ಮೃತಪಟ್ಟ ಯುವತಿ. ಪಾವನಾ ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ವೇಳೆಗೆ ಕೆಲಸ ಮುಗಿಸಿ ಅವರು ದಾಸಕೋಡಿಯಲ್ಲಿ ಬಸ್ಸಿನಿಂದ ಇಳಿದು ಮನೆಗೆ ಮರಳುತ್ತಿದ್ದರು. ಸಂಜೆ ಸುಮಾರು 6.30ರ ವೇಳೆಗೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆ ಬದಿಯ ತೋಡಿಗೆ ಪಾವನಾ ಎಸೆಯಲ್ಪಟ್ಟಿದ್ದಾರೆ. ಕಾರು ಕೂಡ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪಾವನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

LEAVE A REPLY

Please enter your comment!
Please enter your name here