ಮಂಗಳೂರು: ಕುದ್ರೋಳಿ ಶ್ರೀಕ್ಷೇತ್ರದ ಮಾಜಿ ಉಪಾಧ್ಯಕ್ಷ ರಾಘವೇಂದ್ರ ಕೂಳೂರು(92) ಅವರು ಮೃತಪಟ್ಟಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದ ರಾಘವೇಂದ್ರ ಕೂಳೂರು ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಧಾರ್ಮಿಕ ಹಾಗೂ ಸಮಾಜ ಸೇವೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದ ರಾಘವೇಂದ್ರ ಕೂಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಪಡುಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.


