ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಲಾಕೆಟ್ ಧರಿಸಿದ್ದರಿಂದಾಗಿ ಅರಣ್ಯಾಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, ಜೈಲು ಪಾಲಾಗಿದ್ದಾರೆ. ಈ ಬೆನ್ನಲ್ಲೇ ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿಗೂ ಸಂಕಷ್ಟ ಎದುರಾಗಿದೆ. ಇಂದು ಅವರ ನಿವಾಸದ ಮೇಲೂ ಅರಣ್ಯಾಧಿಕಾರಿಗಳ ದಾಳಿ ನಡೆಸಿದ್ದಾರೆ.



ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವಂತ ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿ ಅವರ ನಿವಾಸದ ಮೇಲೆ ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಆರೋಪ ಹಿನ್ನೆಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಆರ್ಯವರ್ಧನ್ ಬಳಿ ಇದ್ದಂತ ಪೆಂಡೆಂಟ್ ಅನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಂದಹಾಗೇ ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿ ಅವರು, ಬಿಗ್ ಬಾಸ್ ಸ್ಪರ್ಧೆಯ ವೇಳೆಯಲ್ಲಿ ತಮ್ಮ ಕೊರಳಿನಲ್ಲಿ ಹುಲಿ ಉಗುರು ಹೊಂದಿದ್ದಂತ ಲಾಕೆಟ್ ಧರಿಸಿದ್ದ ಪೋಟೋ ವೈರಲ್ ಆಗಿತ್ತು. ಈ ಸಂಬಂಧ ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರ ನಿವಾಸದ ಮೇಲೆ ದಾಳಿ ನಡೆಸಿ, ಪೆಂಡೆಂಟ್ ವಶಕ್ಕೆ ಪಡೆದು, ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.