ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಈ ಕೂಡಲೇ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.



ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂದು ರಾಜ್ಯ ಸರ್ಕಾರ 2022-23 ನೇ ಸಾಲಿನ ವಿದ್ಯಾರ್ಥಿವೇತನ ತಡೆ ಹಿಡಿದಿದೆ, SSP ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ತೋರಿಸಿದ್ದರು, ವಿದ್ಯಾರ್ಥಿಗಳ ಖಾತೆಗೆ ಹಣ ಜಮಾವಾಗಿರುವುದಿಲ್ಲ. ಹಣ ಜಮಾವಾಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟುಮಾಡಿದ್ದು ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ, ಶಿಕ್ಷಣದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವಂಚಿತರಾಗಿವುದನ್ನು ತಪ್ಪಿ ಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವತಿಯಿಂದ ಪ್ರತಿಭಟನೆ ಮೂಲಕ ಆಗ್ರಹಿಸಿದರು.


ಈ ಪ್ರತಿಭಟನೆಯಲ್ಲಿ ಮಂಗಳೂರು ಹಾಗೂ ಪುತ್ತೂರು ಜಿಲ್ಲೆಗಳ ಸಂಘಟನಾ ಕಾರ್ಯದರ್ಶಿಗಳಾದ ಶ್ರೀರಾಮ ಅಂಗೀರಸ, ಪ್ರಾಂತ ಕಾರ್ಯ ಸಮಿತಿ ಸದಸ್ಯರಾದ ಶ್ರೇಯಸ್ ಶೆಟ್ಟಿ, ಮಂಗಳೂರು ಮಹಾನಗರ ಕಾರ್ಯದರ್ಶಿಯಾದ ಶ್ರೇಯಸ್ ಇಡಿಯಡ್ಕ, ಪ್ರಮುಖರಾದ ಆದರ್ಶ್, ಶ್ರೀ ಲಕ್ಷ್ಮಿ, ಕೇಸರಿ, ಮನೀಶ್, ಗಗನ್ ಕೆಪಿಟಿ, ವಿಕಾಸ್ ರಾಜ್ ,ಪ್ರಗತಿ ಹಾಗೂ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು