Home ಕರಾವಳಿ ಸೌಜನ್ಯ ಕೊಲೆ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು‌- ಸಿದ್ದರಾಮಯ್ಯ

ಸೌಜನ್ಯ ಕೊಲೆ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು‌- ಸಿದ್ದರಾಮಯ್ಯ

0

ಮಂಗಳೂರು: ಹಲವು ಸಮಯದಿಂದ ಬಾಕಿ ಇರುವ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೃಹ ಸಚಿವ‌ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು‌ ಎಂದರು.


LEAVE A REPLY

Please enter your comment!
Please enter your name here