Home ಕರಾವಳಿ ಕರಾವಳಿಯಲ್ಲೂ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್‌ ಬಸ್‌..!

ಕರಾವಳಿಯಲ್ಲೂ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್‌ ಬಸ್‌..!

0

ಮಂಗಳೂರು: ಬೆಂಗಳೂರಿನಲ್ಲಿ ಕಾರ್ಯಾಚರಿಸುವ ರೀತಿಯಲ್ಲಿ ಕರಾವಳಿ ಭಾಗದಲ್ಲೂ ಸದ್ಯದಲ್ಲೇ ಎಲೆಕ್ಟ್ರಿಕ್‌ ಬಸ್‌ಗಳು ರಸ್ತೆಗಿಳಿಯಲಿವೆ.


ಕೆಲವು ತಿಂಗಳ ಹಿಂದೆ ಮೊದಲನೇ ಹಂತದಲ್ಲಿ ನಿಗಮ ಸೇರಿದ್ದ ಇವಿ ಪ್ಲಸ್‌ ಬಸ್‌ಗಳ ಕಾರ್ಯಾಚರಣೆಯನ್ನು ಮೈಸೂರು, ವೀರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ರೂಟ್‌ಗಳಿಗೆ ಆದ್ಯತೆ ನೀಡಲಾಗಿತ್ತು.

ಇದೀಗ ಸದ್ಯದಲ್ಲೇ ಎರಡನೇ ಹಂತದಲ್ಲಿ ಎಲೆಕ್ಟ್ರಿಕ್‌ ಬಸ್‌ ಖರೀದಿಗೆ ರಾಜ್ಯ ಸರಕಾರ ಮುಂದಾಗಿದ್ದು, ಈ ವೇಳೆ ಮಂಗಳೂರು, ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗಕ್ಕೂ ಎಲೆಕ್ಟ್ರಿಕ್‌ ಬಸ್‌ಗಳು ಹಂಚಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಮೂಲಗಳ ಮಾಹಿತಿಯ ಪ್ರಕಾರ ಸುಮಾರು 40 ಎಲೆಕ್ಟ್ರಿಕ್‌ ಬಸ್‌ಗಳು ಕರಾವಳಿ ಭಾಗದಲ್ಲಿ ಕಾರ್ಯಾಚರಿಸಲಿವೆ. ಅದಕ್ಕೆ ಸಂಬಂಧಿಸಿ ಪೂರಕ ಕೆಲಸಗಳೂ ನಡೆಯುತ್ತಿವೆ. ಎಲೆಕ್ಟ್ರಿಕ್‌ ಬಸ್‌ಗಳ ಚಾರ್ಜ್‌ಗೆಂದು ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆಗೆ ಈಗಾಗಲೇ ಮಂಗಳೂರಿನಲ್ಲಿ ಜಾಗ ಹುಡುಕಲಾಗುತ್ತಿದ್ದು ಕುಂಟಿಕಾನ ದಲ್ಲಿರುವ ಮೂರನೇ ಡಿಪೋದಲ್ಲಿ ಮತ್ತು ಬಿಜೈ ಡಿಪೋದಲ್ಲಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಅದರಂತೆ ಪುತ್ತೂರು ವಿಭಾಗದಲ್ಲಿಯೂ ಜಾಗ ಹುಡುಕಬೇಕಿದೆ.

LEAVE A REPLY

Please enter your comment!
Please enter your name here