ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ ವಂಚನೆ ಪ್ರಕರಣ ಸಂಬಂಧ ಚೈತ್ರಾ ಅಂಡ್ಯಾ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದರು. ಇಂತಹ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಸಿಸಿಬಿ ಸಿದ್ಧತೆ ನಡೆಸಿದೆ ಎಂಬುದಾಗಿ ತಿಳಿದು ಬಂದಿದೆ.



ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೋಟಿ ಕೋಟಿ ಹಣ ಪಡೆದು ವಂಚಿಸಿದಂತ ಪ್ರಕರಣ ಬೆಳಕಿಗೆ ಬಂದಿದತ್ತು. ಈ ಸಂಬಂಧ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಮಂದಿ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು.


ಈ ಚೈತ್ರಾ ಅಂಡ್ ಗ್ಯಾಂಗ್ ನಿಂದ ನಡೆಸಲಾಗಿದ್ದಂತ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಸಿಸಿಬಿ ಅಧಿಕಾರಿಗಳಿಂದ ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ಸಂಬಂಧ ಒಟ್ಟು 68 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಎಲ್ಲರಿಂದ ಹೇಳಿಕೆ ಪಡೆದುಕೊಂಡಿದ್ದು, ಅದನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ತಯಾರಿ ನಡೆಸಿದ್ದಾರೆ.
ಅಂದಹಾಗೇ ಪ್ರಕರಣದಲ್ಲಿ ಆರೋಪಿಗಳಿಂದ ಬರೋಬ್ಬರಿ 4.11 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ದೂರುದಾರ ಗೋವಿಂದ ಬಾಬು ಪೂಜಾರಿ ಬಳಿಯ್ಲಲಿದ್ದಂತ ಪ್ರಕರಣ ಸಂಬಂಧದ ಆಡಿಯೋ, 10 ವೀಡಿಯೋ, ಮೊಬೈಲ್ ಡೇಟಾ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತ ದಾಖಲೆಗಳನ್ನು ಸಿಸಿಬಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.