Home ತಾಜಾ ಸುದ್ದಿ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಪ್ರಪಾತಕ್ಕೆ ಮಹಿಳೆ ಸಾವು, ಐವರು ಗಂಭೀರ

ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಪ್ರಪಾತಕ್ಕೆ ಮಹಿಳೆ ಸಾವು, ಐವರು ಗಂಭೀರ

0

ಮೂಡಿಗೆರೆ: ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ ಸುಮಾರು 4.45 ರ ಹೊತ್ತಿಗೆ ಮೂಡಿಗೆರೆ ತಾಲೂಕಿನ ಚೀಕನ ಹಳ್ಳಿ ಕ್ರಾಸ್ ಬಳಿ ಬಸ್ ಪ್ರಪಾತಕ್ಕೆ ಉರುಳಿದೆ.

ಪರಿಣಾಮ ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಸಾವನ್ನಪ್ಪಿದ್ದುಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಹಾಸನ ಜಿಲ್ಲೆಯ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಸ್ಕೆಬೈಲು-ಚೀಕನಹಳ್ಳಿ ಈ ತಿರುವಿನಲ್ಲಿ ಈ ಮೊದಲು ಸಾಕಷ್ಟು ಅಪಘಾತಗಳು ಸಂಭವಿಸಿವೆ. ಕಳೆದ 10 ತಿಂಗಳಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಚೀಕನಹಳ್ಳಿಯ ಕ್ರಾಸ್‍ಗೆ ತಡೆಗೋಡೆ ನಿರ್ಮಿಸಿ ಎಂದು ಸ್ಥಳೀಯರು ಸರ್ಕಾರಕ್ಕೆ ಮನವಿ ಮಾಡಿದ್ದರೂ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here