ಪುತ್ತೂರು: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೆಗ ಅಂತಿಮ ದರ್ಶನವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪಡೆದರು.
ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೂರಿನ ನಿವಾಸಿ ಮನೀಶ್ ಹಾಗೂ ಚೇತು ಅಲಿಯಾಸ್ ಚೇತನ್ ಪೊಲೀಸರಿಗೆ ಶರಣಾಗಿದ್ದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.