ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಅಭಿನವ ಹಾಲಶ್ರೀ ಜೈಲು ಸೇರಿದ್ದರು. ಅವರಿಗೆ ಕೆಲ ದಿನಗಳ ಹಿಂದೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು ಜಾಮೀನು ದೊರೆತ ನಂತ್ರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.



ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ ಕೋಟಿ ಕೋಟಿ ಹಣ ಪಡೆದು, ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಅಭಿನವ ಹಾಲಶ್ರೀಗಳಿಗೆ ನವೆಂಬರ್.8ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.


ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪದಲ್ಲಿ ಚೈತ್ರಾ ಅಂಡ್ ಟೀಂ ಅನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಜೈಲು ಸೇರಿದ್ದಂತ ಅಭಿನವ ಹಾಲಶ್ರೀ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ನವೆಂಬರ್.8ರಂದು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ಅಭಿನವ ಹಾಲಶ್ರೀ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಲಾಯಿತು. ಈ ಬಳಿಕ ಅಭಿನವ ಹಾಲಶ್ರೀಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತ ಅಭಿನವ ಹಾಲಶ್ರೀ ಅವರನ್ನು ಇದೀಗ ಜಾಮೀನಿನ ಬಳಿಕ ಬಿಡುಗಡೆ ಮಾಡಲಾಗಿದೆ.