ಬೆಂಗಳೂರು: ರಾಜಧಾನಿಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ನಾಲ್ಕು ಕಡೆಗಳಲ್ಲಿ ಸಿಸಿಬಿ (CCB) ದಾಳಿ ನಡೆಸಿ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.
ಐದು ವರ್ಷಗಳ ನಂತರ ಮೀಟರ್ ಬಡ್ಡಿ ದಂಧೆ ನಡೆಸುತಿದ್ದವರನ್ನು ಗುರಿಯಾಗಿಸಿ ಸಿಸಿಬಿ ದಾಳಿ ನಡೆಸಿದೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಡ್ಡಿ ದಂಧೆ ನಡೆಸುತ್ತಿದ್ದವರ ವಿರುದ್ಧ ಮನಿ ಲಾಂಡರಿಂಗ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


