ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಒಂದು ವಾರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣದಲ್ಲಿ 2,543 ಕೇಸ್ ದಾಖಲಾಗಿದೆ. ವಾಹನ ಸವಾರರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನವೆಂಬರ್ 5ರಿಂದ ನವೆಂಬರ್ 12ರವರೆಗೆ ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರ ವಿರುದ್ಧ ಒಟ್ಟು 2543 ಪ್ರಕರಣಗಳನ್ನು ದಾಖಲಿಸಲಾಗಿದೆ. ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ, ಮದ್ಯಪಾನ ಮಾಡಿ ವಾಹನ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವ ವಾಹನ ಚಾಲಕರ ಮೇಲೆ ಪೊಲೀಸರು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ 21 ಪ್ರಕರಣಗಳು, ನೋ ಪಾರ್ಕಿಂಗ್ ನಲ್ಲಿ ವಾಹನ ಪಾರ್ಕ್ – 448 ಪ್ರಕರಣಗಳು, ಹೆಲ್ಮೆಟ್ ರಹಿತ ವಾಹನ ಚಾಲನೆ – 768 ಪ್ರಕರಣಗಳು, ಫುಟ್ ಬೋರ್ಡ್ ನಲ್ಲಿ ನಿಂತು ಬಸ್ ನಲ್ಲಿ ಸಂಚಾರ – 205 ಪ್ರಕರಣಗಳು, ಒನ್ ವೇ ನಲ್ಲಿ ಸಂಚಾರ – 96 ಪ್ರಕರಣಗಳು, ನಂಬರ್ ಪ್ಲೇಟ್ ಇಲ್ಲದ ವಾಹನ – 75 ಪ್ರಕರಣಗಳು, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ – 55 ಪ್ರಕರಣಗಳು, ಟಿಂಟ್ ಅಳವಡಿಕೆ – 48 ಪ್ರಕರಣಗಳು, ಸೀಟ್ ಬೆಲ್ಟ್ ಧರಿಸದೆ ಪ್ರಯಾಣ – 35 ಪ್ರಕರಣಗಳು, ದ್ವಿಚಕ್ರ ವಾಹನಗಳಲ್ಲಿ ಮೂವರು ಪ್ರಯಾಣ – 20 ಪ್ರಕರಣಗಳು, ಆಟೋರಿಕ್ಷಾದಲ್ಲಿ ಅಧಿಕ ಬಾಡಿಗೆ ಬೇಡಿಕೆ – 11 ಪ್ರಕರಣಗಳನ್ನು ದಾಖಲಿಸಲಾಗಿದೆ.