Home ಕರಾವಳಿ ಪುತ್ತೂರು: ಮಹಿಳೆಗೆ ಮದ್ಯ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಅತ್ಯಾಚಾರಗೈದ ಆರೋಪಿ ಅರೆಸ್ಟ್

ಪುತ್ತೂರು: ಮಹಿಳೆಗೆ ಮದ್ಯ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಅತ್ಯಾಚಾರಗೈದ ಆರೋಪಿ ಅರೆಸ್ಟ್

0

ಪುತ್ತೂರು : ಪುತ್ತೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೂಲತಃ ಪುತ್ತೂರು ತಾಲ್ಲೂಕಿನ ಆರ್ಯಾಪು ನಿವಾಸಿಯಾಗಿದ್ದು,ಪ್ರಸ್ತುತ ನಗರದ ಹೊರವಲಯದ ಬನ್ನೂರು ಗ್ರಾಮದಲ್ಲಿ ವಾಸ್ತವ್ಯವಿರುವ ಸಂಶುದ್ದೀನ್ ಆಸ್ಗರ್ ಆಲಿ(23) ಎಂದು ಗುರುತಿಸಲಾಗಿದೆ. ಆರೋಪಿ ಆರ್ಯಾಪು ಗ್ರಾಮದ ಸಂಪ್ಯ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕೆಯಾಗಿ ದುಡಿಯುತ್ತಿದ್ದ ಚೆನ್ನರಾಯಪಟ್ಟಣದ ಸಂತ್ರಸ್ತೆ ಮಹಿಳೆ ಕಳೆದ ನವೆಂಬರ್ 24ರಂದು ರಾತ್ರಿ ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಎಂಬ ಆರೋಪಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿಯನ್ನು ಮಂಗಳವಾರ ಸಂಜೆ ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಪತ್ತೆ ಮಾಡಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here