Home ಕರಾವಳಿ ಪುತ್ತೂರು: `ಕ್ರೀಡಾ ಕಾರಂಜಿ’ ರಾಜ್ಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ: ಕ್ರೀಡಾ ಜ್ಯೋತಿ ರಥಕ್ಕೆ...

ಪುತ್ತೂರು: `ಕ್ರೀಡಾ ಕಾರಂಜಿ’ ರಾಜ್ಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ: ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ

0

ಪುತ್ತೂರು: ನಗರದ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಡಿ.1 ರಿಂದ 4 ರವರೆಗೆ ನಡೆಯಲಿರುವ 17ರ ವಯೋಮಾನದ ಪ್ರೌಢ ಶಾಲಾ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಹಸಿರುವಾಣಿ ಸಮರ್ಪಣೆ ಹಾಗೂ ಕಾರ್ಯಕ್ರಮದ ಪ್ರಯುಕ್ತ ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ ಸಂಚರಿಸುತ್ತಿರುವ ಕ್ರೀಡಾ ಜ್ಯೋತಿ ಹೊತ್ತ ರಥಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮತ್ತು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಜಂಟಿಯಾಗಿ ತಂಗಿನಕಾಯಿ ಒಡೆದು ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಬಳಿಕ ದೇವಳದ ವಠಾರದಿಂದ ಹೊರಟ ರಥವು ಉಪ್ಪಿನಂಗಡಿ, ಆಲಂಕಾರು, ಕಡಬ, ಸವಣೂರು, ಕೆಯ್ಯೂರು, ಕುಂಬ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿತು.

ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಡಿವೈಎಸ್ಪಿ ಅರುಣ್ ನಾಗೇಗೌಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ತಹಶೀಲ್ದಾರ್ ಶಿವಶಂಕರ್ ಜೆ., ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ. ಜಗನ್ನಿವಾಸ ರಾವ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಉದ್ಯಮಿಗಳಾದ ನಳಿನಿ ಪಿ. ರೈ, ಪ್ರಸನ್ನ ಕುಮಾರ್ ಸಾಮೆತಡ್ಕ, ಚಿಕ್ಕಪ್ಪ ನಾಯ್ಕ್ ಅರಿಯಡ್ಕ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜೆ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಜಿ.ಪಂ. ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಬಂಟರ ಸಂಘದ ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆ, ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷಿ ಎ. ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಹಯೋಗದಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಡಿ.2ರಿಂದ 4 ರವರೆಗೆ `ಕ್ರೀಡಾ ಕಾರಂಜಿ’ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ. ಡಿ.೨ ರಂದು ಸಂಜೆ ಕ್ರೀಡಾ ಜ್ಯೋತಿ ರಥ ದರ್ಬೆಗೆ ಆಗಮಿಸಲಿದ್ದು, ಅಲ್ಲಿ ಅದ್ದೂರಿಯ ಸ್ವಾಗತ ನೀಡಲಾಗುವುದು.

ಉಪ್ಪಿನಂಗಡಿಯಲ್ಲಿ ಸ್ವಾಗತಕ್ರೀಡಾ ಜ್ಯೋತಿಯನ್ನು ಉಪ್ಪಿನಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಾಗತಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ಹಾಗೂ ಕ್ರೀಡಾ ಸಮಿತಿಯ ವತಿಯ ಬ್ಯಾಂಡ್ ಸೆಟ್‌ಗಳ ನಾದದೊಂದಿಗೆ ಉಪ್ಪಿನಂಗಡಿಯ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಕ್ರೀಡಾ ಜ್ಯೋತಿಯ ಮೆರವಣಿಗೆಯು ಬಳಿಕ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲಾ ವಠಾರದಲ್ಲಿ ಸಂಪನ್ನಗೊ0ಡು, ಉಪ್ಪಿನಂಗಡಿ ವಲಯದಿಂದ ಸಂಗ್ರಹಿಸಲ್ಪಟ್ಟ ಹೊರೆಕಾಣಿಕೆಯೊಂದಿಗೆ ಮುಂದಿನ ಪ್ರಯಾಣ ಬೆಳೆಸಿತು.

ಈ ಸಂಧರ್ಭ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ., ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾ ಪ್ರಭು, ಸದಸ್ಯರಾದ ಸುರೇಶ ಅತ್ರಮಜಲು, ಯು.ಟಿ. ತೌಸಿಫ್, ಸಂಜೀವ, ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿಚಂದ್ರ ಶಾಂತಿ ಪ್ರಮುಖರಾದ ಬಾಲಚಂದ್ರ ಗುಂಡ್ಯ, ಶ್ರೀಧರ ಭಟ್, ಫಾರೂಕ್, ಮಜೀದ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ ಸಿ.ಆರ್.ಪಿ. ಅಶ್ರಫ್, ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here