Home ಕರಾವಳಿ ಪುತ್ತೂರು: 80ಕ್ಕಿಂತಲೂ ಅಧಿಕ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: 80ಕ್ಕಿಂತಲೂ ಅಧಿಕ ಕಳ್ಳತನ ಪ್ರಕರಣದ ಆರೋಪಿಯ ಬಂಧನ

0

ಪುತ್ತೂರು: 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಇತ್ತೆ ಬರ್ಫೆ ಅಬೂಬಕ್ಕರ್ ಎಂಬಾತನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ 457,380IPC ಹಾಗೂ ಠಾಣಾ 379 IPC ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ಉಪ್ಪಳ್ಳಿ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. ಆರೋಪಿಯ ಮೇಲೆ ಮಂಗಳೂರು, ಬಂಟ್ವಾಳ, ವಿಟ್ಲ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿತ್ತು.

LEAVE A REPLY

Please enter your comment!
Please enter your name here