Home ತಾಜಾ ಸುದ್ದಿ ಕಾರ್ -ಟ್ರಕ್ ಡಿಕ್ಕಿಯಾಗಿ ಭಾರಿ ಸ್ಪೋಟ: ಮಗು ಸೇರಿ ಎಂಟು ಜನರು ಸಜೀವ ದಹನ

ಕಾರ್ -ಟ್ರಕ್ ಡಿಕ್ಕಿಯಾಗಿ ಭಾರಿ ಸ್ಪೋಟ: ಮಗು ಸೇರಿ ಎಂಟು ಜನರು ಸಜೀವ ದಹನ

0

ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಜನರು ಕಾರಿನಲ್ಲಿಯೇ ಸುಟ್ಟು ಕರಕಲಾದ ದುರಂತ ಘಟನೆ ಉತ್ತರ ಪ್ರದೇಶದ ಭೋಜಿಪುರ ಬಳಿಯ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದವರು ಮದುವೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು.

ಅಪಘಾತದ ವೇಳೆ ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಒಳಗಿದ್ದವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಟ್ರಕ್‌ ನ ಡಂಪರ್‌ ಗೆ ಡಿಕ್ಕಿ ಹೊಡೆದ ಕಾರಿನ ಟೈರ್ ಸ್ಫೋಟವಾಗಿದೆ. ಪರಿಣಾಮ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

“ಭೋಜಿಪುರದ ಬಳಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟ್ರಕ್‌ ಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಕಾರಿನಲ್ಲಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದೆ. ಏಳು ವಯಸ್ಕರು ಮತ್ತು ಒಂದು ಮಗು ಮೃತಪಟ್ಟಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಬರೇಲಿ ಎಸ್‌ಎಸ್‌ಪಿ ಘುಲೆ ಸುಶೀಲ್ ಚಂದ್ರಭಾನ್ ಸುದ್ದಿ ಸಂಸ್ಥೆ ಎಎನ್‌ಐ ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here