NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರು ಇಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್ ಅವರನ್ನು ಭೇಟಿ ಮಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತುಳು ಭಾಷೆ ವಿಭಾಗವನ್ನು ಪ್ರತ್ಯೇಕವಾಗಿ ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಮಾಡಲಾಯಿತು.
ತುಳು ಭಾಷೆ ಪ್ರತ್ಯೇಕ ವಿಭಾಗದ ಸ್ಥಾಪನೆಗೆ ಉನ್ನತ ಶಿಕ್ಷಣ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ತುಳು ವಿಭಾಗ ಸ್ಥಾಪಿಸುವ ಭರವಸೆ ನೀಡಿದರು.