ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಆಹಾರ ಮತ್ತು ನಾಗರೀಕರ ಪೂರೈಕೆ ಇಲಾಖೆಯವರು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಡುವೆ ರಾಜ್ಯದಲ್ಲಿ2.95 ಅರ್ಜಿಗಳು ಬಾಕಿಯಿದ್ದು, ಶೀಘ್ರವೇ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ನಡುವೆ ಒಂದು ವೇಳೆ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದರೆ, ರೇಷನ್ ಕಾರ್ಡ್ ನಲ್ಲಿ ಹೆಸರು ಬಂದಿದೆಯಾ ಎನ್ನುವುದನ್ನು ಕಂಡುಕೊಳ್ಳಬಹುದಾಗಿದೆ.
ಆಧಾರ್ ಅಧಿಕೃತ ವೆಬ್ಸೈಟ್ನಿಂದ ಕರ್ನಾಟಕ ಪಡಿತರ ಚೀಟಿ ಪಟ್ಟಿಯನ್ನು ಪರಿಶೀಲಿಸುವುದು ಹೇಗೆ? ಕರ್ನಾಟಕ ಪಡಿತರ ಚೀಟಿ ಪಟ್ಟಿಯನ್ನು ಪರಿಶೀಲಿಸಲು, ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು:
ಹಂತ 1 – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ (ahara.kar.nic.in) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2 – ‘ಇ-ಸೇವೆಗಳು’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 3 – ನಂತರ, ‘ಇ-ರೇಷನ್’ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 4 – ‘ಗ್ರಾಮ ಪಟ್ಟಿ’ ಟ್ಯಾಬ್ ಅನ್ನು ಆಯ್ಕೆ ಮಾಡಿ.
ಹಂತ 5 – ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ಮತ್ತು ‘ಗೋ’ ಕ್ಲಿಕ್ ಮಾಡಿ.
ಹಂತ 6 – ಹಾಗೆ ಮಾಡಿದಾಗ, ಆಯ್ಕೆಯಾದ ಗ್ರಾಮದ ಎಲ್ಲಾ ಪಡಿತರ ಚೀಟಿಗಳ ಪಟ್ಟಿ ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ.