Home ಕರಾವಳಿ ಬಂಟ್ವಾಳ: ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳ ಬಂಧನ

0

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.


ಮಂಗಳೂರು ‌ಬೈಕಂಪಾಡಿಯ ಅಶೋಕ, ಮಂಗಳೂರು ದಂಬೇಲ್ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿ.14 ರಂದು ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಅಂಗಡಿಯೊಂದಕ್ಕೆ ಬಂದ ಆರೋಪಿಗಳು ಅಂಗಡಿ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಚೈನ್ ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ‌ ಪಿ.ಎಸ್.ಐ ಗಳಾದ ರಾಮಕೃಷ್ಣ, ಕಲೈಮಾರ್ ಮತ್ತವರ ಸಿಬ್ಬಂದಿ ಇರ್ಷಾದ್, ರಾಜೇಶ್, ಗಣೇಶ್, ಮೋಹನ, ವಿವೇಕ್ ಅವರು ಬೆಂಜನಪದವಿನ ಕರಾವಳಿ ಸೈಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ‌ ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ಒಳಪಡಿಸಲಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿ ಅರೋಪಿಗಳ ಯಾವುದೇ ಸುಳಿವು ಇರಲಿಲ್ಲ, ಘಟನಾ ಸ್ಥಳದಲ್ಲಿ ಸಿ.ಸಿ ಕ್ಯಾಮರ ಕೂಡ ಇರದಿದ್ದು, ವಾರದೊಳಗೆ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಹಾಗೂ ತಂಡಕ್ಕೆ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here