ಉಳ್ಳಾಲ: ಶ್ರೀ ಆದಿ ಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕುಂಪಲ ಇದರ ಬ್ರಹ್ಮಕಲಶೋತ್ಸವ ದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ.ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ ವಿಧಾನ ಪರಿಷತ್ ಸದಸ್ಯರೂ ಆದ ಶ್ರೀ ಪ್ರತಾಪ್ ಸಿಂಹ ನಾಯಕ್ ಮಂಗಳೂರು ದಕ್ಷಿಣ ವಿಧಾನ ಸಭಾ ಸದಸ್ಯರಾದ ಶ್ರೀ ವೇದವ್ಯಾಸ ಕಾಮತ್ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಅನಿಲ್ ದಾಸ್ ಪ್ರಧಾನ ಕಾರ್ಯದರ್ಶಿ ಶ್ರೀ ನಾರಾಯಣ ಕುಂಪಲ ಕ್ಷೇತ್ರ ಧರ್ಮದರ್ಶಿ ಶ್ರೀ ಚರಣ್ ಬೇಬಿ ನಾರಾಯಣ ಪಂಡಿತರು ಮಾತ್ರ ಮಂಡಳಿ ಅಧ್ಯಕ್ಷ ರಾದ ಶ್ರೀಮತಿ ಆಶಾ ಸುರೇಶ್ ಉಪಾಧ್ಯಕ್ಷ ರಾದ ಶ್ರೀಮತಿ ಶಕುಂತಲಾ ರಾಜ್ ಉಪಸ್ಥಿತರಿದ್ದರು