ಮೂಡಬಿದ್ರೆ: ಮೂಡಬಿದ್ರೆಯ ಪ್ರತಿಷ್ಠಿತ “ಆಳ್ವಾಸ್ ವಿದ್ಯಾಸಂಸ್ಥೆ” ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇದೆ. ಕಾಲೇಜಿನಲ್ಲಿ ಎರಡು ದಿನಗಳ ಹಿಂದೆ ನಡೆದ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಸಾವಿಗೆ ನ್ಯಾಯವನ್ನ ದೊರಕಿಸಿ ಕೊಡಬೇಕೆಂಬ ನಿಟ್ಟಿನಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವರವರ ನೇತೃತ್ವದಲ್ಲಿ ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರನ್ನು ಭೇಟಿ ಮಾಡಿ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹಿಸಲಾಯಿತು.
ಕಳೆದ ಕೆಲವು ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಅನುಮಾಸ್ಪದ ರೀತಿಯಲ್ಲಿ ಆತ್ಮಹತ್ಯೆಯನ್ನು ಮಾಡಿಕೊಳ್ಳುವುದರ ವಿರುದ್ಧ ಪ್ರತಿಭಟನೆಯನ್ನು ಕೂಡ ಮಾಡಲಾಗುವುದು ಎಂದು ಎಚ್ಚರಿಸಲಾಯಿತು.ನಂತರ ಮೂಡಬಿದ್ರೆಯ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂದೇಶ್ ಅವರಿಗೂ ಕೂಡ NSUI ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು.
ಈ ಸಂದರ್ಭ ಮೂಡಬಿದ್ರೆ NSUI ಅಧ್ಯಕ್ಷ ಶ್ರವಣ್ ಆಳ್ವ, NSUI ಮುಖಂಡರಾದಂತಹ ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಂಷ್ಠನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.