Home ಕರಾವಳಿ ಮಂಗಳೂರು: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷ ಬಂಧಿತ ಆರೋಪಿ.

ಆರೋಪಿ ಸಂತೋಷನನ್ನು ಬಂಧಿಸಿ ಮಂಗಳೂರಿನ 5ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ಜಾಮೀನಿನ ಮೇರೆಗೆ ಬಿಡುಗಡೆಗೊಳಿಸಲಾಗಿದೆ. ಆರೋಪಿ ಬೆಳ್ತಂಗಡಿಯ ಛಿಬಿದ್ರೆಗೆ ಬಂದಿರುವ ಮಾಹಿತಿ ಮೇರೆಗೆ ಆತನನ್ನು ಡಿ.22ರಂದು ಚಿಭಿದ್ರೆ ಬಸ್ ನಿಲ್ದಾಣದ ಹತ್ತಿರ ಬಂಧಿಸಲಾಗಿತ್ತು.

LEAVE A REPLY

Please enter your comment!
Please enter your name here