ಪದವೀಧರ ಹಾಗೂ ಡಿಪ್ಲೋಮಾ ಉತ್ತೀರ್ಣರಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ‘ಯುವನಿಧಿ’ ಯೋಜನೆಗೆ ನೋಂದಾಣಿಯು ಈಗಾಗಲೇ ಶೂರುವಾಗಿದ್ದು, ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ‘ಯುವನಿಧಿ’ ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.



ಈ ನಡುವೆ ಆರ್ಹ ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ https://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ನೇರ ನಗದು ವರ್ಗಾವಣೆ (Direct Transfer) ಸ್ವೀಕರಿಸಲು ಆಧಾರ್ ಸಂಖ್ಯೆಯೊಂದಿಗೆ ಸೇರ್ಪಡೆಯಾದ (Aadhar-seeded) ಬ್ಯಾಂಕ್ ಖಾತೆಯನ್ನು ನೀವು ಹೊಂದಿರಬೇಕು.Aadhar-linked mobile number Cod ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ಅಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ನೀಡಬೇಕು.


ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಬೇಕು. ಅಥವಾ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಸಿಕವಾಗಿ ಸ್ವಯಂ ಘೋಷಿತ ನಿರುದ್ಯೋಗ ಪ್ರಮಾಣ ಪತ್ರ ದೃಢೀಕರಣ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಗೆ ಸಂಪರ್ಕಿಸಬಹುದು. ಈ ನಡುವೆ ಪದವಿ, ಡಿಪ್ಲೋಮಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಹಿಂದಿನ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಪ್ರಸ್ತುತ ನಿರುದ್ಯೋಗಿಗಳಾಗಿರುವ ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ಮಾಹಿತಿ ನೀಡುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂಧಿಗಳು ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಅದಕ್ಕಾಗಿ ಶಾಲೆ-ಕಾಲೇಜು ಹಂತದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಪ್ಲೇಸ್‍ಮೆಂಟ್ ಸೆಲ್‍ನ ನಿರ್ವಾಹಕರು ವಿಶೇಷ ಗಮನಹರಿಸುವಂತೆ ತಿಳಿಸಲಾಗಿದೆ. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸೌಲಭ್ಯದ ದುರುಪಯೋಗಪಡಿಸಿಕೊಂಡಲ್ಲಿ ಅಂತಹವರನ್ನು ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದಲ್ಲದೆ ಹಣವನ್ನು ಬಡ್ಡಿಸಹಿತ ವಸೂಲಾತಿಗೆ ಕ್ರಮವಹಿಸಲಾಗುವುದು.