Home ಉಡುಪಿ ಮಲ್ಪೆ ಬಂದರಿನಲ್ಲಿ ಆಕಸ್ಮಿಕವಾಗಿ ಸ್ಕೂಟರ್ ಸಮೇತ ನೀರಿಗೆ ಬಿದ್ದ ವ್ಯಕ್ತಿ ನಾಪತ್ತೆ..!

ಮಲ್ಪೆ ಬಂದರಿನಲ್ಲಿ ಆಕಸ್ಮಿಕವಾಗಿ ಸ್ಕೂಟರ್ ಸಮೇತ ನೀರಿಗೆ ಬಿದ್ದ ವ್ಯಕ್ತಿ ನಾಪತ್ತೆ..!

0

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ.

ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್‌ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್‌ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ.

LEAVE A REPLY

Please enter your comment!
Please enter your name here