ಬೆಳ್ತಂಗಡಿ: 8ನೇ ತರಗತಿ ವಿದ್ಯಾರ್ಥಿಯೊರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ ಉಜಿರೆ ಖಾಸಗಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಯಕ್ಷಿತ್ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಯಾವುದೋ ಕಾರಣಕ್ಕೆ ಜೀವನದಲ್ಲಿ ನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ತಾಯಿಯ ಸೀರೆಯನ್ನು ಬಿದಿರಿನ ಅಡ್ಡಕ್ಕೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ತಿಳಿದುಬಂದಿದೆ. ಈ ಸಂಬಂಧ ಯಕ್ಷಿತ್ ಅವರ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


