ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ರವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆಯನ್ನು ಖಂಡಿಸಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ರವರ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಉಪಆಯುಕ್ತರಿಗೆ ದೂರನ್ನು ಸಲ್ಲಿಸಲಾಯಿತು.
ತಕ್ಷಣವೇ ಸ್ಪಂದಿಸಿದ ಪೊಲೀಸ್ ಉಪಾಯುಕ್ತರು, ಪ್ರಕರಣವನ್ನು ಸುರತ್ಕಲ್ ಠಾಣೆಗೆ ವರ್ಗಯಿಸಿ ಶೀಘ್ರವೇ ಆರೋಪಿಯನ್ನು ಬಂಧಿಸುವ ಭರವಸೆಯನ್ನು ನೀಡಿದ್ದಾರೆ.