ಖಾಸಗಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ರಾಮನಗರ ಬಳಿ ನಡೆದಿದೆ.



ಇಲ್ಲಿನ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಣ್ಣ, ಪುಟ್ಟ ಗಾಯಗಳಿಂದಿಗೆ ಅಪಾಯದಿಂದ ಪಾರಾಗಿದ್ದಾರೆ.
