ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.