Home ಕರಾವಳಿ ಬಂಟ್ವಾಳ: ಕಾಂಕ್ರಿಟ್ ರಸ್ತೆಯಲ್ಲಿ ಮರಳು – ಸ್ಕಿಡ್ ಆದ ಬೈಕ್, ಸವಾರ ಗಂಭೀರ

ಬಂಟ್ವಾಳ: ಕಾಂಕ್ರಿಟ್ ರಸ್ತೆಯಲ್ಲಿ ಮರಳು – ಸ್ಕಿಡ್ ಆದ ಬೈಕ್, ಸವಾರ ಗಂಭೀರ

0

ಬಂಟ್ವಾಳ: ಸ್ಕಿಡ್ ಆಗಿ ಬೈಕ್ ಸವಾರನೋರ್ವ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.25 ರಂದು ರಾತ್ರಿ ಸುಮಾರು 10 ಗಂಟೆಗೆ ವೇಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಬೈಕ್ ಸವಾರ ದಿಲೀಪ್ ಪುತ್ತೂರು ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಕಲ್ಲಡ್ಕ ಸಮೀಪ ದ ಕುದ್ರೆಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ. ಕಾಂಕ್ರೀಟ್ ರಸ್ತೆಯಲ್ಲಿ ರಾಶಿ ಬಿದ್ದಿರುವ ಮರಳು ಅಪಘಾತಕ್ಕೆ ಕಾರಣವೆನ್ನಲಾಗಿದೆ.ಅಸಮರ್ಪಕ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಕುದ್ರೆಬೆಟ್ಟು ಎಂಬಲ್ಲಿ ರಸ್ತೆಯ ಡಿವೈಡರ್ ಪ್ರವೇಶ ಮಾಡುವ ಜಾಗದಲ್ಲಿ ಸೂಚನಫಲಕಗಳಿಲ್ಲ ಮತ್ತು ಕಾಂಕ್ರೀಟ್ ‌ಕಾಮಗಾರಿ ಮುಗಿದ ಭಾಗದ ರಸ್ತೆಯ ಮೇಲೆ ಮರಳು ತುಂಬಿಕೊಂಡಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here