ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ.
ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಇನೋವಾ ಕಾರು ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಹಿಂದಿಕ್ಕುವಾಗ ರಿಕ್ಷಾದ ಬಲಬಾಗಕ್ಕೆ ಡಿಕ್ಕಿ ಹೊಡೆದು ತನ್ನ ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಂತಮ್ಮ (77) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.