Home ಉಡುಪಿ ಉಡುಪಿ : ಅಕ್ರಮ ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು- ಮೂವರ ಬಂಧನ

ಉಡುಪಿ : ಅಕ್ರಮ ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು- ಮೂವರ ಬಂಧನ

0

ಉಡುಪಿ : ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ಸಂಬಂಧಿಸಿ ಮೂವರನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.1 ರಂದು ನಡೆದಿದೆ.

ಓರ್ವ ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸದ್ರಿ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ ಪವನ್‌ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಮತ್ತು ಆರೋಪಿ ಪಂಜು ಎಂಬವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here