ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ 381 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಭಾರತೀಯ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಹೌದು ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಈ ಮೂಲಕ ರಾಷ್ಟ್ರ ಸೇವೆಗೆ ಸಿದ್ಧವಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.
ವಯೋಮಿತಿ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಟ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಟೆಕ್ ಮತ್ತು ನಾನ್ ಟೆಕ್ ಹುದ್ದೆಗಳಿಗೆ 35 ವರ್ಷದವರೆಗೆ ಅವಕಾಶ ಕಲ್ಪಿಸಲಾಗಿದೆ. ಸೇನೆಯ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ವಿದ್ಯಾರ್ಹತೆ
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಬಿಇ, ಬಿ.ಟೆಕ್, ಪದವಿ ಪೂರ್ಣಗೊಳಿಸಿರಬೇಕು.
ವೇತನ
ಆಯ್ಕೆಯಾದಂತ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 56,100 ಸ್ಟೈಪೆಂಡ್ ಪಾವತಿಸಲಾಗುತ್ತದೆ. ಹುದ್ದೆಗಳಿಗೆ ಅನುಗುಣವಾಗಿ 56,100 ರಿಂದ 2,50,000 ರೂ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಅರ್ಹ ಅಭ್ಯರ್ಥಿಗಳು ಸಲ್ಲಿಸಿದಂತ ಅರ್ಜಿಯನ್ನು ಪರಿಶೀಲನೆ ನಡೆಸಿ, ಸೇನೆಗೆ ಅವಶ್ಯಕವಿರು ಮಾನದಂಡಗಳ ಆಧಾರದ ಮೇಲೆ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತ್ರ ಅರ್ಹ ಅಭ್ಯರ್ಥಿಗಳಿಗೆ ಎಸ್ ಎಸ್ ಬಿ ಸಂದರ್ಶನ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ವಿಧಾನ
ಭಾರತೀಯ ಸೇನೆಯು ಹೊರಡಿಸಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸೋದಕ್ಕೆwww.joinindianarmy.nic.inಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿ ಕೂಡ ಇದರಲ್ಲೇ ಲಭ್ಯವಾಗಲಿದೆ.
ಒಟ್ಟು ಹುದ್ದೆಗಳ ಸಂಖ್ಯೆ-381 ಆಗಿರುತ್ತದೆ.
ಅರ್ಜಿ ಸಲ್ಲಿಸೋದಕ್ಕೆ ಕೊನೆಯ ದಿನಾಂಕ 21-02-2024 ಆಗಿದ್ದು, ಈ ಕೂಡಲೇ ಭಾರತೀಯ ಸೇನೆ ಬಯಸೋರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.