ಪುತ್ತೂರು: ದ.ಕ.ಜಿಲ್ಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆದ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ಮಾಡುವ ಕುರಿತು ಮಹತ್ವದ ಸಮಾಲೋಚನಾ ಸಭೆ ಪುತ್ತೂರಿನಲ್ಲಿ ನಡೆದಿದೆ. ಪುತ್ತಿಲ ಪರಿವಾರದ ನಾಯಕರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಮತ್ತೆ ಬಿಜೆಪಿಯೊಂದಿಗೆ ಸೇರ್ಪಡೆಗೆ ಮೂರು ದಿನಗಳ ಗಡುವು ನೀಡಿದ್ದಾರೆ. ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪ್ರಮುಖ ಬೇಡಿಕೆಯನ್ನು ಇಟ್ಟಿದೆ. ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅರುಣ್ ಪುತ್ತಿಲ, ಸಭೆಯ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ಕೊಡುವ ಸಲುವಾಗಿ ಮಾತೃಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ನಿರ್ಧಾರವನ್ನು ಮೂರು ದಿನಗಳೊಳಗೆ ಕೈಗೊಳ್ಳಬೇಕು. ಇಲ್ಲವಾದಲ್ಲಿ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧವಾಗಿದೆ ಎಂದಿದ್ದಾರೆ.