Home ಕರಾವಳಿ ಉಳ್ಳಾಲ: ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ..!

ಉಳ್ಳಾಲ: ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ..!

0

ಉಳ್ಳಾಲ: ಹಿರಿಯ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ, ದಲಿತ ನಾಯಕ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಕಳೆದ‌‌ ಬಾರಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here