ಮಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್‌ಸಿಯುಐ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ ನಡೆಯಿತು.



ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಕಟೀಲು ನಿವಾಸದ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.ಕೇಂದ್ರ ದಿಂದ ರಾಜ್ಯಕ್ಕೆ ಅನುದಾನ ತರುವಲ್ಲಿ ಮೌನ ತಾಳಿದ ಹಿನ್ನಲೆ ಬಿಜೆಪಿಗೆ ಧಿಕ್ಕಾರ ಕೂಗುತ್ತಾ ಮನೆ ಮುಂದೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರು ನುಗ್ಗಲು ಯತ್ನಿಸಿದರು. ಆದರೆ ಸ್ಥಳದಲ್ಲಿ ಇದ್ದ ಪೊಲೀಸರು ಮುತ್ತಿಗೆ ತಡೆದು ಕಾರ್ಯಕರ್ತರನ್ನು ವಶಕ್ಕೆ ಪಡೆದರು.


ಪ್ರತಿಭಟನೆಯಲ್ಲಿ NSUI ಕರ್ನಾಟಕ ರಾಜ್ಯ ಕಾರ್ಯದರ್ಶಿ ಬಾತೀಷ್ ಅಳಕೆಮಜಲು, ಮುಖಂಡರಾದ ತನುಷ್ ಶೆಟ್ಟಿ,ಅಲ್ಪಾಝ್,ಹರ್ಷನ್ ಪೂಜಯ,ಸುಖ್ವಿಂದರ್ ಸಿಂಗ್,ಸಾಹಿಲ್ ಮಂಚಿಲ,ವಿಶಾಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.