Home ತಾಜಾ ಸುದ್ದಿ ಗೃಹಲಕ್ಷ್ಮಿಯ 5ನೇ ಕಂತಿನ ಹಣ ಇನ್ನೂ ಬಂದಿಲ್ವ? ಹಾಗಾದ್ರೇ ಹೀಗೆ ಮಾಡಿ!

ಗೃಹಲಕ್ಷ್ಮಿಯ 5ನೇ ಕಂತಿನ ಹಣ ಇನ್ನೂ ಬಂದಿಲ್ವ? ಹಾಗಾದ್ರೇ ಹೀಗೆ ಮಾಡಿ!

0

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಶುರು ಮಾಡಿದೆ ಎಂದು ತಿಳಿಸಲಾಗಿದೆ. ಫೆಬ್ರವರಿ 15 ನೇ ದಿನಾಂಕದಿಂದ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಪ್ರಾರಂಭಿಸುತ್ತದೆ ಎನ್ನಲಾಗಿದೆ.


 

ಈ ನಡುವೆ ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿ ದ ಬಳಿಕ ಆರನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

LEAVE A REPLY

Please enter your comment!
Please enter your name here