Home ತಾಜಾ ಸುದ್ದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಮುಖಂಡ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಮುಖಂಡ

0

ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಡಾ. ಶಶಿಧರ್ ಹಟ್ರಿ ಡೆತ್‌ನೋಟ್ ಬರೆದಿಟ್ಟು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಳು ದಂಧೆಕೋರ ಶರಣಗೌಡ ಪಾಟೀಲ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ದೋಣ ಪೊಲೀಸರು ಭೇಟಿ
ನೀಡಿ ಪರಿಶೀಲನೆ ನಡೆಸಿದ್ದಾರೆ.


LEAVE A REPLY

Please enter your comment!
Please enter your name here