ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ BJP ನಾಯಕರ ವಿರುದ್ಧ FIR ಖಂಡಿಸಿ 19 ರಂದು ನಗರದ ಎಲ್ಲಾ ಠಾಣೆಗಳ ಮುಂದೆ ಜೈ ಶ್ರೀರಾಮ್ ಘೋಷಣೆಗಳೊಂದಿಗೆ ಧರಣಿಗೆ VHP ಕರೆ ನೀಡಿದೆ.
ಈ ಬಗ್ಗೆ ಮಾತನಾಡಿದ VHP ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಘಟನೆಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಆಗಿದೆ. FIR ದಾಖಲಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಮಂಗಳೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆ ಎದುರು ಜೈಶ್ರೀರಾಮ್ ಘೋಷಣೆಯೊಂದಿಗೆ ಹರತಾಳ ಮಾಡುತ್ತೇವೆ ಎಂದರು.