ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ.
ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಇನ್ನೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದಲ್ಲದೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.