Home ಕರಾವಳಿ ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ- ಶಾಸಕ ಹರೀಶ್ ಪೂಂಜಾ ಅವರ ಪೋಸ್ಟರ್ ವೈರಲ್

ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ- ಶಾಸಕ ಹರೀಶ್ ಪೂಂಜಾ ಅವರ ಪೋಸ್ಟರ್ ವೈರಲ್

0

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್ ಮಂಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೇಸ್ ವಿರುದ್ದ ಬಿಜೆಪಿ ಕಿಡಿಕಾರಿದ್ದು, ಅದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಪೋಸ್ಟರ್ ಒಂದು ಭಾರೀ ವೈರಲ್ ಆಗಿದೆ.

ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಬರೆದಿರುವ ಪೋಸ್ಟರ್ ಹಿಡಿದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವರ ಬಜೆಟ್ ಮಂಡನೆಯ ಬೆನ್ನಲ್ಲೆ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here