Home ಕರಾವಳಿ HSRP ಗಡುವು ವಿಸ್ತರಣೆ ಬೆನ್ನಲ್ಲೇ ನಕಲಿ QR ಕೋಡ್‌ಗಳ ಹಾವಳಿ: ವಾಹನ ಸವಾರರೇ ಎಚ್ಚರ

HSRP ಗಡುವು ವಿಸ್ತರಣೆ ಬೆನ್ನಲ್ಲೇ ನಕಲಿ QR ಕೋಡ್‌ಗಳ ಹಾವಳಿ: ವಾಹನ ಸವಾರರೇ ಎಚ್ಚರ

0

ಬೆಂಗಳೂರು, ಫೆಬ್ರವರಿ 17: ವಾಹನಗಳಿಗೆ ಎಚ್‌ಎಸ್‌ಆರ್‌ಪಿ (HSRP) ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಲು ನೀಡಿರುವ ಡೆಡ್‌ಲೈನ್‌ ಅನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ. ಇನ್ನೂ ಒಂದು ಕೋಟಿಗೂ ಅಧಿಕ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕಿರುವ ಕಾರಣ ಮೇ 31ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಗುಡುವು ವಿಸ್ತರಿಸಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ನಾ ಮುಂದು ತಾ ಮುಂದು ಎನ್ನುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು ನಕಲಿ ಕ್ಯೂ ಆರ್ ಕೋಡ್ ಲಿಂಕ್​ಗಳನ್ನು ಆನ್‌ಲೈನ್​ನಲ್ಲಿ ಹಾಕಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಹೀಗಾಗಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬುಕ್‌ ಮಾಡುವ ಮುನ್ನ ಎಚ್ಚರ ಇರಲಿ.

ಕೆಲವು ಕಿಡಿಗೇಡಿಗಳು ಎಚ್‌ಎಸ್‌ಆರ್‌ಪಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳನ್ನು ಕ್ರಿಯೇಟ್‌ ಮಾಡಿ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಇದೇ ರೀತಿಯ ಮೋಸದ ವಂಚನೆಗಳು ಈಗಾಗಲೇ ರಾಜ್ಯ ಸೇರಿದಂತೆ ದೇಶದ ನಾನಾ ಕಡೆ ನಡೆದಿದ್ದು, ಜನರು ಸಾಕಷ್ಟು ಹಣ ಕಳೆದುಕೊಂಡಿದ್ದಾರೆ. ಈ ಸೈಟ್‌ಗಳು ನಿಜವಾದ ಸೈಟ್‌ನಂತೆ ಕಾಣಿಸಿ ಮಾಹಿತಿಯನ್ನು ಪಡೆಯುತ್ತವೆ ಬಳಿಕ ಹಣ ಪಡೆದು ವಂಚಿಸುತ್ತಿವೆ ಎಂದು ವರದಿಯಾಗಿದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ಅಧಿಕೃತ ಸೈಟ್‌ಗೆ ಭೇಟಿ ನೀಡಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗೆ ಪಡೆಯಬೇಕಾಗಿದೆ.

ಇನ್ನು ಎಚ್‌ಎಸ್‌ಆರ್‌ಪಿ ವೆಬ್‌ಸೈಟ್‌ ಎಂದು ತೋರಿಸಿ ನಕಲಿ ಕ್ಯೂ ಆರ್ ಕೋಡ್ ಲಿಂಕ್‌ಗಳು ಕೂಡ ಆನ್‌ಲೈನ್‌ನಲ್ಲಿ ತೋರಿಸುತ್ತಿವೆ. ಈ ಬಗ್ಗೆ ವ್ಯಕ್ತಿಯೊಬ್ಬರು ನಕಲಿ ಕ್ಯೂ ಆರ್ ಕೋಡ್ ಲಿಂಕ್‌ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಕ್ರಮ ಕೈಗೊಳ್ಳುವಂತೆ ಬೆಂಗಳೂರು ಸಂಚಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಕಲಿ ವೆಬ್‌ಸೈಟ್‌ ಹಾಗೂ ನಕಲಿ ಕ್ಯೂ ಆರ್ ಕೋಡ್‌ಗಳ ಹೆಚ್ಚಾಗುತ್ತಿದೆ. ಹೀಗಾಗಿ ವಾಹನ ಸವಾರರು ತಾಳ್ಮೆಯಿಂದ ಪರೀಕ್ಷಿಸಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಬುಕ್‌ ಮಾಡಬೇಕಾಗಿದೆ. ಹಾಗೂ ಎಚ್‌ಎಸ್‌ಆರ್‌ಪಿ ಪಡೆಯುವ ವಿಧಾನಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕಾಗಿದೆ. ಇನ್ನುಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಲು ದ್ವಿಚಕ್ರ ವಾಹನಗಳಿಗೆ ನಂಬರ್‌ ಪ್ಲೇಟ್‌ ದರ 400 ರೂನಿಂದ 600 ರೂ ವರೆಗೆ ಇದೆ. ಅದೇ ರೀತಿ ನಾಲ್ಕು ಚಕ್ರದ ವಾಹನಗಳಿಗೆ ಜೋಡಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಶುಲ್ಕವು 650 ರೂಪಾಯಿನಿಂದ 800 ರೂಪಾಯಿ ವರೆಗೂ ಇರಲಿದೆ. ಹೀಗಾಗಿ ವಾಹನ ಸವಾರರು ಮೋಸ ಹೋಗದೆ ಎಚ್ಚರ ವಹಿಸಬೇಕಾಗಿದೆ.

LEAVE A REPLY

Please enter your comment!
Please enter your name here