ಮಂಗಳೂರು: ಜೆರೋಸಾ ಶಾಲೆಯ ಶಿಕ್ಷಕಿಯಿಂದ ಫಾಠ ಮಾಡುವಾಗ ಹಿಂದೂ ಧರ್ಮದ ನಿಂದನೆ ಹಾಗೂ ಆ ಬಳಿಕದ ಬೆಳವಣಿಗೆಗಳ ಬಗ್ಗೆ ವಿಶೇಷ ತನಿಖೆಯ ಹೊಣೆಯನ್ನು ಐಎಎಸ್ ಅಧಿಕಾರಿ, ಶಾಲಾ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತರಿಗೆ ಆಕಾಶ್ ಶಂಕರ್ ರಿಗೆ ವಹಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಅವರು ನಡೆದುಕೊಂಡ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಆಗಿದೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆಯದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ. ದೂರಿನ ಬಗ್ಗೆ ತನಿಖೆ ಆಗುತ್ತದೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಶಿಕ್ಷಕಿಯ ವಿರುದ್ಧವೂ ಶಿಕ್ಷಣ ಇಲಾಖೆ ತನಿಖೆ ಮಾಡುತ್ತದೆ. ಈ ತನಿಖೆಯನ್ನು ಪೊಲೀಸರು ಮಾಡೋದಕ್ಕೆ ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.


