Home ಕರಾವಳಿ ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ- ಸ್ಥಳೀಯರಿಂದ ರಕ್ಷಣೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ- ಸ್ಥಳೀಯರಿಂದ ರಕ್ಷಣೆ

0

ಬಂಟ್ವಾಳ : ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪುತ್ತೂರಿನ ನಿಶ್ಚಿತ್ (25) ಎಂದು ಗುರುತಿಸಲಾಗಿದೆ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿಗಳಾದ ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯಿಂದ ಪಾರು ಮಾಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here