Home ಕರಾವಳಿ ಮೂಡುಬಿದಿರೆ: ದನದ ಮಾಂಸ ಮಾರಾಟ – ಓರ್ವನ ಬಂಧನ

ಮೂಡುಬಿದಿರೆ: ದನದ ಮಾಂಸ ಮಾರಾಟ – ಓರ್ವನ ಬಂಧನ

0

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ದಾಳಿ ವೇಳೆ ಕೋಲ್ಡ್ ಸ್ಟೋರೆಜ್ ನಲ್ಲಿ 10 ಕೆ.ಜಿಯಷ್ಟು ದನದ ಮಾಂಸ ದೊರೆತಿದೆ. ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಈ ಹಿಂದೆಯೂ ಇಸ್ಮಾಯಿಲ್ ಮೇಲೆ ಪ್ರಕರಣಗಳು ದಾಖಲಾಗಿವೆ.


LEAVE A REPLY

Please enter your comment!
Please enter your name here