Home ಕರಾವಳಿ ಉಡುಪಿ: ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ದಾಖಲು

0

ಉಡುಪಿ: ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್‌ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ.ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಫ್ಡಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಐ. ಗಡಾದ್‌ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here