Home ಕರಾವಳಿ BREAKING NEWS: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

BREAKING NEWS: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

0

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು.


ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪ ನದಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಅವರ ಶವ ಪತ್ತೆಯಾಗಿದೆ. ಇವರು ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳು.

ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪರೀಕ್ಷೆ ಮುಗಿದ ನಂತರ ಈಜಲು ತೆರಳಿದ ನಾಲ್ವರು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here