ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದೆ.
ಹೌದು. ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದು, ಸ್ಪೋಟಿಸುವ ಉದ್ದೇಶದಿಂದಲೇ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಎನ್ ಐ ಎ ತಂಡ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಟ ನಡೆಸಿದ್ದಾರೆ ಎಂದು ಕೂಡ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸದ್ಯ, ಪೊಲೀಸರು ಸಿಸಿಟಿವಿಯ ದೃಶ್ಯಾವಳಿಗಳನ್ನು ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಹೋಟೆಲ್ ನ ಚೇರ್ ನಲ್ಲಿ ಇಟ್ಟಿದ್ದ ಒಂದು ಬ್ಯಾಗ್ ನಲ್ಲಿದ್ದ ಸ್ಫೋಟಕ ಏಕಾಏಕಿ ಸ್ಫೋಟಗೊಂಡಿದ್ದು,
ಬೆಂಕಿಯಿಂದಾಗಿ ಹೋಟೆಲ್ ಕೆಲವು ಭಾಗಗಳಲ್ಲಿ ಬೆಂಕಿಯಿಂದ ಹಾನಿಯಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.