ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿ ಬಿಜು ಅಬ್ರಹಾಂ ಎಂಬಾತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಂದಿದ್ದಾರೆ ಎಂದು ಹೇಳಲಾಗಿದೆ. ಎಣ್ಮೂರಿನ ಚಿದಾನಂದ ಎಂಬವರ ಮನೆಯಲ್ಲಿ ಬಿಜು ವಾಸಿಸುತ್ತಿದ್ದು ಆತನ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಸುಲ್ತಾನ್ ಪಾಳ್ಯ ಎಂಬಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಬಿಜು ವಾಸವಿದ್ದ ಮನೆಯ ಶೋಧವನ್ನು ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.