ಕಡಬ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಅ್ಯಸಿಡ್ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮೂವರು ವಿದ್ಯಾರ್ಥಿನಿಯರಿಗೆ ಸರ್ಕಾರ 4 ಲಕ್ಷ ರೂ. ಪರಿಹಾರ ಘೋಷಿಸಿದೆ.
ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ಕೂಡಲೇ ನೀಡಲಾಗುವುದು. ವಿದ್ಯಾರ್ಥಿಗಳ ಸಂಪೂರ್ಣ ಚಿಕಿತ್ಸಾ
ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.